ಕರ್ನಾಟಕ

karnataka

ETV Bharat / state

ನೂತನ ಸಾರಿಗೆ ದಂಡ ಕಡಿಮೆ ಮಾಡುವಂತೆ ಒತ್ತಾಯ: ಹಸಿರು ಸೇನೆಯಿಂದ ಪ್ರತಿಭಟನೆ

ನೂತನ ಸಾರಿಗೆ ದಂಡ ಕಡಿಮೆ ಮಾಡುವಂತೆ ಒತ್ತಾಯಿಸಿ ಕೋಲಾರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಆರ್‌ಟಿಓ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Protests by Karnataka State Farmers' Union in Kolar
ಹಸಿರುಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

By

Published : Dec 17, 2019, 11:56 PM IST

ಕೋಲಾರ:ಜನ ಸಮಾನ್ಯರಿಗೆ ಹಾಗೂ ರೈತರಿಗೆ ಹೊರೆಯಾಗುತ್ತಿರುವ ನೂತನ ಸಾರಿಗೆ ದಂಡ ಕಡಿಮೆ ಮಾಡುವಂತೆ ಒತ್ತಾಯಿಸಿ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು, ಆರ್‌ಟಿಓ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ನೂತನ ಮೋಟಾರ್ ಕಾಯ್ದೆಯಿಂದ ಜನರು ಹೈರಾಣಾಗಿದ್ದು, ದಂಡ ಪಾವತಿ ಮಾಡಲಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೂತನ ಸಂಚಾರ ನಿಯಮಗಳ ಬಗ್ಗೆ ಜನ ಸಾಮಾನ್ಯರಲ್ಲಿ ಕರಪತ್ರದ ಮುಖಾಂತರ ಜಾಗೃತಿ ಮೂಡಿಸಬೇಕು ಎಂದರು.

ಇನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆರ್‌ಟಿಓ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಚಾಲಕ ಪರವಾನಗೆ ಮತ್ತು ಇನ್ಸುರೆನ್ಸ್ ಅದಾಲತ್ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details