ಕೋಲಾರ:ಸಂಸದ ಮುನಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಪಿಡಬ್ಲ್ಯುಡಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ದೂರು ಕೊಡಲು ಮುಂದಾಗಿದ್ದಾರೆ.
ಕೋಲಾರದ ಹೊರವಲಯದ ಅರಣ್ಯ ಅತಿಥಿ ಗೃಹದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಸಂಸದ ಮುನಿಸ್ವಾಮಿ ಪಿಡಬ್ಲ್ಯುಡಿ ಇಲಾಖೆಯ ಇಂಜಿನಿಯರ್ಗಳನ್ನು ಮನಸೋ ಇಚ್ಛೆ ಬೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಂಗಾರಪೇಟೆ ಸೇರಿದಂತೆ ಕೋಲಾರ ಜಿಲ್ಲೆಯ ಬಹುತೇಕ ಕಡೆ ಎಸ್‌ಎಪಿ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಸಂಸದರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾಗಿ ಆರೋಪಿಸಿದ್ದಾರೆ.