ಕೋಲಾರ:ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ತಾಲೂಕಿನ ದೊಡ್ಡಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಪಾಠಗಳು ನಡೆಯುತ್ತಿವೆ. ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ನಾಲ್ಕು ಕೊಠಡಿಗಳಿದ್ದು, ಅದರಲ್ಲಿ ಒಂದು ಕೊಠಡಿಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.
ಜೊತೆಗೆ ಉಳಿದ ಕೊಠಡಿಗಳು ಮಳೆಯ ನೀರಿಗೆ ಸೋರುತ್ತಿದ್ದು, ವಿದ್ಯಾರ್ಥಿಗಳು ಭಯದಲ್ಲೇ ಪಾಠ ಕೇಳುವಂತಾಗಿದೆ. ಅಲ್ಲದೆ, ಸರಿಯಾದ ಕೊಠಡಿ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ಶಾಲೆ ಆವರಣದಲ್ಲಿ ಪಾಠ ಮಾಡಲಾಗುತ್ತಿದೆ. ಶಾಲಾ ಆಡಳಿತ ಮಂಡಳಿಯವರು ಸೇರಿದಂತೆ ಗ್ರಾಮಸ್ಥರು ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಯವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಕೋಲಾರದಲ್ಲಿ ಭಾರಿ ಮಳೆಗೆ ಗೋಡೆ ಕುಸಿದಿರುವುದು ಕಟ್ಟಡದ ಗೋಡೆ ಕುಸಿದು ಬಿದ್ದಿರುವುದಲ್ಲದೆ ಕೊಠಡಿ ಸಂಪೂರ್ಣವಾಗಿ ಮಳೆ ನೀರಿನಿಂದ ಸುರಿಯುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಂಗೈಯಲ್ಲಿ ಜೀವ ಹಿಡಿದುಕೊಂಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓದಿ:ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ.. ಕೇತೇನಹಳ್ಳಿ ಫಾಲ್ಸ್ ಬಳಿ ಹೆಚ್ಚಿದ ಜನಸಾಂದ್ರತೆ