ಕೋಲಾರ:ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ವೇಮಗಲ್ನ ಬುಡ್ಗ ಜಂಗಮ ಜಾತಿಗೆ ಸೇರಿದ ಶಾಲಾ ಮಕ್ಕಳು ಕೋಲಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಾತಿ ಪ್ರಮಾಣ ಪತ್ರಕ್ಕಾಗಿ ಪ್ರತಿಭಟನೆ ನಡೆಸಿದ ಶಾಲಾ ಮಕ್ಕಳು.. - Protest against State government
ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಶಾಲಾ ಮಕ್ಕಳು ಕೋಲಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೋಲಾರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಲೆಮಾರಿ ಜನಾಂಗ ಹಾಗೂ ಬುಡ್ಗ ಜಂಗಮ ಸಮುದಾಯದ ಮಕ್ಕಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದಾಗಿ ಉದ್ಯೋಗ ಸೇರಿ ನೂರಾರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಏಳೆಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ಜಾತಿ ಪ್ರಮಾಣ ಪತ್ರ ವಿವಾದಕ್ಕೆ ಅಧಿಕಾರಿಗಳು ತೆರೆ ಎಳೆಯದೆ ಮೀನಮೇಷ ಎಣಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ನಾಳೆಯಿಂದಲೇ ಅರ್ಜಿಗಳನ್ನು ಪಡೆದು ಜಾತಿ ಪ್ರಮಾಣ ಪತ್ರ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ, ಕ್ರಮ ಕೈಗೊಳ್ಳುವುದಿಲ್ಲ ಎಂದು ದೂರಿದರು.