ಕೋಲಾರ : ಹಳೆ ದ್ವೇಷದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಸೆಕ್ಯುರಿಟಿ ಗಾರ್ಡ್‌ವೋರ್ವನನ್ನು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿ ಬಳಿ ಶನಿವಾರ ರಾತ್ರಿ ಈ ಪ್ರಕರಣ ನಡೆದಿದೆ. ಮಿಣಜೇನಹಳ್ಳಿಯ ಮಂಜುನಾಥ್ (48) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈತ ಬಂಗಾರಪೇಟೆ ತಾಲೂಕಿನ ಮಾದಮುತ್ತನಹಳ್ಳಿ ಗ್ರಾಮದ ಶ್ರೀನಿವಾಸ್ನೊಂದಿಗೆ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ಎರಡು ಮೂರು ಬಾರಿ ನ್ಯಾಯ ಪಂಚಾಯಿತಿ ಮಾಡಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ಕಳೆದ ರಾತ್ರಿ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ಇನ್ನು ಮಂಜುನಾಥ್ ಎರಡನೇ ಪತ್ನಿ ನೇತ್ರಾ ಅಕ್ರಮ ಸಂಬಂಧವೂ ಕೊಲೆಯ ಹಿಂದೆ ತಳುಕ ಹಾಕಿಕೊಂಡಿದೆ. ಈ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಮಂಜುನಾಥ್ ತನ್ನ ಮೊದಲ ಪತ್ನಿ ಸೌಭಾಗ್ಯಮ್ಮ ಎಂಬುವರಿಂದ ದೂರವಿದ್ದು, 2 ನೇ ಪತ್ನಿ ನೇತ್ರಾಳೊಂದಿಗೆ ಜೀವನ ನಡೆಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದಾರೆ. 2ನೇ ಪತ್ನಿ ನೇತ್ರಾ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡಿದ್ದಾರೆ ಅನ್ನೋದು ಮೊದಲ ಪತ್ನಿ ಸೌಭಾಗ್ಯಮ್ಮ ಅವರ ಆರೋಪವಾಗಿದೆ.