ಕೋಲಾರ: ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಬೇಕಾಗಿ ಹೇಳಿದ್ದರೂ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ...ವ್ಯಕ್ತಿಯೋರ್ವನ ಬಂಧನ
ಏಪ್ರಿಲ್ 1 ರವರೆಗೂ ಮಾಂಸ ಅಂಗಡಿ, ಮಧ್ಯೆ ಮಾರಾಟ, ಹೋಟೆಲ್, ಐಸ್ ಕ್ರೀಂ ಪಾರ್ಲರ್, ಪಬ್, ಬಾರ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಿತ್ತು. ಆದ್ರೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ, ಆತನ ಅಂಗಡಿಗೆ ಬೀಗ ಹಾಕಿಸಿದ್ದಾರೆ.
ನಗರದ ಟವರ್ ಭಾಗದಲ್ಲಿ ಜಿಲ್ಲಾಡಳಿತದ ಆದೇಶವನ್ನ ಉಲ್ಲಂಘನೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಕೋಲಾರ ನಗರ ಠಾಣಾ ಪೊಲೀಸರು ದಾಳಿ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೀಗ ಹಾಕಿಸಿ, ಆತನನ್ನು ಬಂಧಿಸಿದ್ದಾರೆ. ಸದ್ಯ ಕೋಲಾರ ನಗರ ಠಾಣಾ ಪೊಲೀಸರಿಂದ ಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ.
ಇನ್ನು ನಿನ್ನೆ ಜಿಲ್ಲಾಡಳಿತ ಏಪ್ರಿಲ್ 1 ರವರೆಗೂ ಮಾಂಸ ಅಂಗಡಿ, ಮಧ್ಯೆ ಮಾರಾಟ, ಹೋಟೆಲ್, ಐಸ್ ಕ್ರೀಂ ಪಾರ್ಲರ್, ಪಬ್, ಬಾರ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಿತ್ತು. ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ರಾಜಾರೋಷವಾಗಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ಸದ್ಯ ಪೊಲೀಸರು ತಮ್ಮ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.