ಕೋಲಾರ: ಮೂರು ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರದಲ್ಲಿ ಸರಣಿ ಕಳ್ಳತನ: ಪೊಲೀಸರ ವಿರುದ್ಧ ಸ್ಥಳೀಯರ ಅಸಮಾಧಾನ - theft
ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಹೋಂಡಾ ಸ್ಟೇಡಿಯಂ ಪಕ್ಕದಲ್ಲಿರುವ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಪೊಲೀಸರ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಹೋಂಡಾ ಸ್ಟೇಡಿಯಂ ಪಕ್ಕದಲ್ಲಿರುವ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಾಲೂರು ಪಟ್ಟಣದಲ್ಲಿರುವ ಎಸ್.ವಿ.ಎಸ್.ಪೇಂಟ್ ಹಾಗೂ ಲಕ್ಷ್ಮೀ ವೆಂಕಟೇಶ್ವರ ಹಾರ್ಡ್ವೇರ್ ಅಂಗಡಿಗಳಲ್ಲಿ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ.
ಇನ್ನು ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಅಂಗಡಿಗಳ ಶೆಟರ್ ಹಾಗೂ ಮೇಲೆ ಹಾಕಲಾಗಿದ್ದ ಶೀಟ್ಗಳನ್ನ ಮುರಿದು ಹಣ ಮತ್ತು ಹಾರ್ಡ್ವೇರ್ ಸಾಮಗ್ರಿಗಳನ್ನು ಕದ್ದೊಯ್ದಿದ್ದಾರೆ. ಮಾಲೂರು ಪಟ್ಟಣದಲ್ಲಿ ಕಳೆದ ಹದಿನೈದು ದಿನದಲ್ಲಿ 3 ಕಳ್ಳತನ ಪ್ರಕರಣಗಳು ನಡೆದಿದ್ದು, ನಗರದ ನಿವಾಸಿಗಳು ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.