ಕೋಲಾರ :ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ನಗರದದಲ್ಲಿ ಫ್ಲೆಕ್ಸ್ಗಳ ಹವಾ ಜೋರಾಗಿದೆ.
ಸಿದ್ದು, ಡಿಕೆಶಿ ಕೋಲಾರ ಪ್ರವಾಸ : ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ಗಳು
ಸಿದ್ದರಾಮಯ್ಯ ಹಾಗೂ ಡಿಕೆಶಿ ಕೋಲಾರಕ್ಕೆ ಆಗಮಿಸಿರುವ ಹಿನ್ನೆಲೆ ಕೋಲಾರದ ಕೆಜಿಎಫ್ ಸೇರಿದಂತೆ ಬಂಗಾರಪೇಟೆ ಹಾಗೂ ಮಾಲೂರಿನಲ್ಲಿ ಫ್ಲೆಕ್ಸ್ಗಳು ರಾರಾಜಿಸುತ್ತಿವೆ..
ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ಗಳು
ಜಿಲ್ಲೆಯ ವಿವಿಧೆಡೆ ಜನರಿಗೆ ದಿನಸಿ ಕಿಟ್ಗಳನ್ನ ಹಂಚಿಕೆ ಮಾಡುವ ಸಲುವಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಕೋಲಾರಕ್ಕೆ ಆಗಮಿಸಿರುವ ಹಿನ್ನೆಲೆ ಕೋಲಾರದ ಕೆಜಿಎಫ್ ಸೇರಿದಂತೆ ಬಂಗಾರಪೇಟೆ ಹಾಗೂ ಮಾಲೂರಿನಲ್ಲಿ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಈ ಮೂಲಕ ಉಭಯ ನಾಯಕರಿಗೆ ಭರ್ಜರಿಯಾಗಿ ಸ್ವಾಗತಿಸಲಾಗಿದೆ.
ಕಾರ್ಯಕ್ರಮಕ್ಕೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಘಟಾನುಘಟಿ ನಾಯಕರು ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.