ಕರ್ನಾಟಕ

karnataka

ETV Bharat / state

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ : ಶಾಸಕ ಎಸ್​ ಎನ್ ನಾರಾಯಣಸ್ವಾಮಿ - ಈಟಿವಿ ಭಾರತ್​ ಕನ್ನಡ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹೋದ ಚುನಾವಣೆಯಲ್ಲಿ ಸೋತ ನಂತರ ಈ ಬಾರಿಯ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ಬಾರಿ ಕುತೂಹಲದ ವಿಷಯವಾಗಿದೆ. ಸಿದ್ದರಾಮಯ್ಯ ಅವರ ಬಹುತೇಕ ಅಭಿಮಾನಿಗಳು ತಮ್ಮ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಈಗ ಬಂಗಾರಪೇಟೆ ಶಾಸಕ ಎಸ್​ ಎನ್ ನಾರಾಯಣಸ್ವಾಮಿ ಕೂಡ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.

siddaramaiah-
ಶಾಸಕ ಎಸ್​ ಎನ್ ನಾರಾಯಣಸ್ವಾಮಿ

By

Published : Sep 27, 2022, 6:51 PM IST

ಕೋಲಾರ : ಮುಂದಿನ 2023 ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಖಚಿತ, ಅವರೊಟ್ಟಿಗೆ ಎಲ್ಲರೂ ಜೊತೆಯಾಗಿ ಜಿಲ್ಲೆಯನ್ನು ಅಭಿವೃದ್ಧಿ ಮಾಡೋಣ ಎಂದು ಬಂಗಾರಪೇಟೆ ಶಾಸಕ ಎಸ್​ ಎನ್ ನಾರಾಯಣಸ್ವಾಮಿ ಹೇಳಿದರು.

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ವಿವಿಧ ಅನುದಾನದಲ್ಲಿ ಸುಮಾರು 40 ಲಕ್ಷ ವೆಚ್ಚದ ಸಿಸಿ ರಸ್ತೆಯ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯನ್ನು ವಿಶೇಷವಾಗಿ ಮಾದರಿಯಾಗಿ ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಸಿದ್ದರಾಮಯ್ಯ 1400 ಕೋಟಿ ಖರ್ಚು ಮಾಡಿ ಕೆ.ಸಿ ವ್ಯಾಲಿ ನೀರು ತಂದಿದ್ದಾರೆ. ಅದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಪಕ್ಷದ ನಾಯಕರು ಸಿದ್ದರಾಮಯ್ಯ ಸ್ಪರ್ಧೆಗೆ ಒಪ್ಪಿಗೆ ನೀಡಿದ್ದಾರೆ ಎಂದರು.

ಮುಂದಿನ ವಿಧಾನ ಸಭಾಚುನಾವಣೆಯಲ್ಲಿ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಜನ ಪಕ್ಷಾತೀತವಾಗಿ ಅವರನ್ನು ಬೆಂಬಲಿಸಿ ಮತ್ತಷ್ಟು ಅಭಿವೃದ್ಧಿಗೆ ಸಹಕರಿಸಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಕೇವಲ ಹಣದಿಂದ ಮತದಾರರನ್ನು ಕೊಂಡುಕೊಳ್ಳುಬಹುದು ಎಂಬ ಭ್ರಮೆಯಿಂದ ಅಭಿವೃದ್ಧಿಯ ಕಡೆ ಗಮನಹರಿಸಿಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಹಣ ಪಡೆದು ಮತ ಕಾಂಗ್ರೆಸ್ ಪಕ್ಷಕ್ಕೆ ಹಾಕುತ್ತಾರೆ.

ಕಾಂಗ್ರೆಸ್ ಪಕ್ಷದಿಂದ ಸರ್ವ ಧರ್ಮ ಜಾತಿಗಳ ಅಭಿವೃದ್ಧಿ ಸಾಧ್ಯ. ಬಿಜೆಪಿಯಿಂದ ಕೇವಲ ಆಯ್ದ ಜಾತಿಗಳಿಗೆ ಮಾತ್ರ ಸೀಮಿತವಾಗಿದ್ದು ಜನ ಬುದ್ಧಿವಂತರಿಂದ್ದು ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ :ಬೊಮ್ಮಾಯಿ ಇಸ್ ಹೆಡ್ ಆಫ್ ದಿ ಗವರ್ನಮೆಂಟ್.. ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ: ಸಿದ್ದರಾಮಯ್ಯ ವಾಗ್ದಾಳಿ

ABOUT THE AUTHOR

...view details