ಕೋಲಾರ:ಜಿಲ್ಲೆಯಲ್ಲಿಂದು ಕೊರೊನಾ ಭೀತಿ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಕಲ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ನಡುವೆ ಸುಮಾರು ಮೂರು ಅಡಿಗಳ ಅಂತರದ ಬಾಕ್ಸ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ಬರುವಂತಹ ಎಲ್ಲಾ ಸಿಬ್ಬಂದಿ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸಿ ನಿಯಮಗಳನ್ನು ಪಾಲಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಗೂ ಮುನ್ನ ನಿಯಮ ಪಾಲನೆ ಅಲ್ಲದೆ ಕೇಂದ್ರಗಳಿಗೆ ಬಂದಂತಹ ಸಿಬ್ಬಂದಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಜಿಲ್ಲೆಯಾದ್ಯಂತ ಸುಮಾರು 20,906 ಮಂದಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದು, 70 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ಪ್ರತಿ ಕೊಠಡಿಯಲ್ಲಿ ಸುಮಾರು 20 ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಮಾಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನ ನೀಡಿ ಪರೀಕ್ಷಾ ಕೇಂದ್ರಗಳ ಒಳಗೆ ಬಿಡಲಾಯಿತು.
ಇದೇ ವೇಳೆ ಪರೀಕ್ಷಾ ಕೇಂದ್ರಗಳಿಗೆ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹಾಗೂ ಡಿಡಿಪಿಐ ರತ್ನಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.