ಕೋಲಾರ: ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಒಂದು ತಿಂಗಳಲ್ಲಿ ಏನ್ ಬೇಕಾದ್ರು ಆಗತ್ತೆ. ಕಾಂಗ್ರೆಸ್ಗೆ ವಂಚಿಸಿ ಹೋದವರ ಸ್ಥಿತಿ ಅತಂತ್ರವಾಗಿದೆ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ ನುಡಿದಿದ್ದಾರೆ.
ಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ಏನ್ ಬೇಕಾದ್ರು ಆಗಬಹುದು: ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ - dks latest news
ಬಿಜೆಪಿ ಪ್ರೇರಿತವಾಗಿ ನಡೆಸಿದ ಐಟಿ, ಇಡಿ ದಾಳಿಗಳ ವಿರುದ್ಧ ನ್ಯಾಯಾಲಯದಲ್ಲಿ ಜಯ ಸಿಕ್ಕಿದ್ದು, ಶಾಸಕ ಡಿಕೆಶಿಗೆ ಜಾಮೀನು ಮಂಜೂರಾಗಿದೆ. ರಾಜ್ಯದಲ್ಲಿ ಇನ್ನು ಒಂದು ತಿಂಗಳಲ್ಲಿ ಏನಾಗುತ್ತದೆ ಗೊತ್ತಿಲ್ಲ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಶಾಸಕ ಕೆ.ವೈ.ನಂಜೇಗೌಡ
ಡಿಕೆಶಿಗೆ ಜಾಮೀನು ಸಿಕ್ಕ ಹಿನ್ನೆಲೆ, ಮಾಲೂರಿನಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರನ್ನು ಹಿಮ್ಮೆಟ್ಟಿಸಲು ಹೂಡಿದ ಐಟಿ, ಇಡಿ ದಾಳಿಗಳ ವಿರುದ್ಧ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿರುವುದನ್ನು ಬಿಜೆಪಿ ಸಹಿಸುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡವಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಅದನ್ನು ಯಾವ ಅಧಿಕಾರಿಗಳು ಕೇಳುತ್ತಿಲ್ಲ. ಕ್ಯಾನ್ಸರ್ ಕಾಯಿಲೆಯಂತೆ ಅನರ್ಹ ಶಾಸಕರು ನರಳುತ್ತಿದ್ದಾರೆ ಎಂದು ಹೇಳಿದರು.