ಕೋಲಾರ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕುರಿ ದೊಡ್ಡಿ ಮೇಲೆ ಬೀದಿ ನಾಯಿಗಳ ದಾಳಿ ನಡೆಸಿರುವ ಪರಿಣಾಮ ಐದು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆಯಲ್ಲಿ ನಡೆದಿದೆ.
ಕುರಿ ದೊಡ್ಡಿ ಮೇಲೆ ಬೀದಿ ನಾಯಿಗಳ ದಾಳಿ: ಐದು ಕುರಿಗಳು ಸಾವು - undefined
ಕುರಿ ದೊಡ್ಡಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಐದು ಕುರಿಗಳು ಸಾವನ್ನಪ್ಪಿವೆ. ಕಳೆದ ಒಂದು ತಿಂಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 25 ಕ್ಕೂ ಹೆಚ್ಚು ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿ ಸೂಕ್ತಕ್ರಮ ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.
ಬೀದಿ ನಾಯಿಗಳ ದಾಳಿ
ಕುರಿಗಳು ಬೂದಿಕೋಟೆ ಗ್ರಾಮದ ರುಕ್ಮಿಣಿ ಎಂಬುವರಿಗೆ ಸೇರಿದ್ದು, ಕಳೆದ ಒಂದು ತಿಂಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 25 ಕ್ಕೂ ಹೆಚ್ಚು ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ.
ಅಲ್ಲದೆ ಸ್ಥಳೀಯರು ನಾಯಿಗಳ ಹಾವಳಿಯಿಂದ ಬೇಸತ್ತಿದ್ದು, ನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ನಾಯಿಗಳ ದಾಳಿಗೆ ಬಲಿಯಾಗಿರುವ ಕುರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.