ಕೋಲಾರ:ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಎಲ್ಎಲ್ಬಿ ಹಾಸ್ಟೆಲ್ನ 34 ವಿದ್ಯಾರ್ಥಿಗಳು ಫುಡ್ ಪಾಯಿಸನ್ ಆಗಿ ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್‌ನಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದು, ಈ ಪೈಕಿ 34 ಮಂದಿ ಚಿತ್ರಾನ್ನ ಸೇವಿಸಿದ್ದರು.
ಚಿತ್ರಾನ್ನದಲ್ಲಿ ಹಲ್ಲಿ ಬಿದ್ದಿರುವುದು ಕಂಡು ಬಂದಿದೆ ಎನ್ನಲಾಗ್ತಿದೆ. ಇದನ್ನು ಗಮನಿಸಿದ ಕೆಲವರು ತಿಂಡಿ ತಿನ್ನದೇ, ಈಗಾಗಲೇ ತಿಂದಿದ್ದ ವಿದ್ಯಾರ್ಥಿಗಳಿಗೆ ವಿಷಯ ತಿಳಿಸಿದ್ದಾರೆ. ಅಷ್ಟೊತ್ತಿಗಾಗಲೇ ಪರೀಕ್ಷೆ ಬರೆಯಲು ಹೋಗಿದ್ದ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅನಾರೋಗ್ಯಕ್ಕೀಡಾಗಿದ್ದರು. ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.