ಕೋಲಾರ:ಕೊರೊನಾ ಎಫೆಕ್ಟ್ ಎಲ್ಲಾ ಕ್ಷೇತ್ರಗಳಿಗಿಂತಲೂ ಶಿಕ್ಷಣ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರಿದ್ದು, ಮುಂದಿನ ವಾರ ಆನ್ಲೈನ್ ಶಿಕ್ಷಣದ ಬಗ್ಗೆ ಖಚಿತ ಆದೇಶ ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ವಾರ ಆನ್ಲೈನ್ ಶಿಕ್ಷಣದ ಕುರಿತು ಖಚಿತ ಆದೇಶ: ಸಚಿವ ಸುರೇಶ್ ಕುಮಾರ್ - ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ
ಕಂಟೇನ್ಮೆಂಟ್ ಝೋನ್ ಪ್ರದೇಶದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಅವಕಾಶ ನೀಡಲಿದ್ದು, ವಲಸೆ ಬಂದಿರುವ ಕಾರ್ಮಿಕರ ಮಕ್ಕಳಿಗೆ ಅವರಿರುವ ಸ್ಥಳದಲ್ಲಿಯೇ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಎಲ್ಕೆಜಿ, ಯುಕೆಜಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವುದು ಸರಿಯಲ್ಲ. ಆಡಿಕೊಂಡಿರುವ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವುದು ನನಗೆ ಅರ್ಥವಾಗದ ವಿಚಾರ. ಅಲ್ಲದೆ ನಿಮ್ಹಾನ್ಸ್ ವೈದ್ಯರು ಆರು ವರ್ಷದ ಮಗುವಿನವರೆಗೂ ಆನ್ಲೈನ್ ಶಿಕ್ಷಣ ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
ಜೂನ್ 25ರಿಂದ ಜುಲೈ 4ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ 18ರಿಂದ 24 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಗುವುದು. ಈ ಹಿನ್ನೆಲೆ ಹೈಕೋರ್ಟ್ಗೆ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವುದಾಗಿ ಪ್ರಮಾಣಪತ್ರ ನೀಡಲಾಗಿದ್ದು, ಪೋಷಕರ ಆತಂಕ ನಿವಾರಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಹಾಗೂ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು.