ಕೋಲಾರ : ಸರ್ಕಾರಿ ಶಾಲಾ ಶಿಕ್ಷಕ ವಿನಾಕಾರಣ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಿ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಕೋಲಾರದಲ್ಲಿ ಜರುಗಿದೆ.
ವಿದ್ಯಾರ್ಥಿಗಳ ಮೇಲೆ ಶಿಕ್ಷಕನ ದೌರ್ಜನ್ಯ ಆರೋಪ: ಪ್ರತಿಭಟನೆ- ವರ್ಗಾವಣೆ! - ಶಿಕ್ಷಕನ ದೌರ್ಜನ್ಯ
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ವಿನಾಕಾರಣ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸೆಗಿದ್ದಾರೆ ಎಂದು ಆರೋಪಿಸಿ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಕೋಲಾರದಲ್ಲಿ ಜರುಗಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಜರುಗಿದ್ದು, ಶಾಲೆಯ ಹಿಂದಿ ಶಿಕ್ಷಕರಾದ ಅನಂತಯ್ಯ ಎಂಬುವರು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಅವಿನಾಶ್ ಹಾಗೂ ಭುವನ್ ಎಂಬ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೇ ವಿದ್ಯಾರ್ಥಿಗಳ ಹಾಜರಿ ಪುಸ್ತಕ ಹರಿದು ಹಾಕಿ ಅರೆ ಹುಚ್ಚನಂತೆ ವರ್ತಿಸಿದ್ದಾನೆಂದು ಆರೋಪಿಸಿದ್ದಾರೆ.
ಇನ್ನು ಹಲ್ಲೆ ವಿಚಾರವಾಗಿ ಪ್ರಶ್ನೆ ಮಾಡಿದ ಪೋಷಕರಿಗೆ, ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಈ ಹಿಂದೆಯೂ ಸಹ ಇದೇ ಘಟನೆ ನಡೆದಿದ್ದು, ಶಿಕ್ಷಕನ ವಿರುದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಇನ್ನು ಘಟನೆ ಸಂಬಂಧ ಬಂಗಾರಪೇಟೆ ಬಿಇಒ ಬೇರೆಡೆಗೆ ವರ್ಗಾವಣೆಗೆ ಸೂಚಿಸಿದ್ದಾರೆ.