ಕೋಲಾರ: ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ಶಿಕ್ಷಕರ ಸಮ್ಮುಖದಲ್ಲೇ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಮಕ್ಕಳಿಗೆ ಮೈ- ಕೈ, ಬೆನ್ನು ನೋವು ಸೇರಿದಂತೆ ಹುಷಾರಿಲ್ಲದೆ ಬಳಲುತ್ತಿದ್ದಾರೆ ಎನ್ನಲಾಗ್ತಿದೆ. ಇನ್ನು ವಸತಿ ಶಾಲೆಯ ಹಿರಿಯ ಶಿಕ್ಷಕರು ಮತ್ತು ಸಿಬ್ಬಂದಿ ತಮ್ಮನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತ ವಿಡಿಯೋಗಳು ವೈರಲ್ ಆಗಿವೆ.
ಪೋಷಕರ ಬಳಿ ಮಕ್ಕಳ ಅಳಲು: ಈ ಘಟನೆ ಬಗ್ಗೆ ಮಕ್ಕಳೇ ತಮ್ಮ ಪೋಷಕರ ಎದುರು ಅಳಲನ್ನು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.