ಕೋಲಾರ:ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಕೋಲಾರದಲ್ಲಿ ಮೊದಲ ಬಾರಿಗೆ ನಡೆದ ರಾಜ್ಯಮಟ್ಟದ ದಲಿತ ಸಾಹಿತ್ಯ ಸಮ್ಮೇಳನ - ಮೊದಲ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನ
ಕೋಲಾರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ದಲಿತ ಸಾಹಿತ್ಯ ಸಮ್ಮೇಳನ
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲೆಯ ಸಂಸದ ಎಸ್.ಮುನಿಸ್ವಾಮಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಸಮ್ಮೇಳನದ ಅಧ್ಯಕ್ಷರನ್ನಾಗಿ ಹಿರಿಯ ಕವಿ ಹಾಗೂ ರಾಜ್ಯಸಭಾ ಸದಸ್ಯ ಎಲ್.ಹನುಂತಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು.
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮನು ಬಳಿಗಾರ್ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ರಾಜ್ಯಾಧ್ಯಕ್ಷರು ಭಾಗವಹಿಸಿದ್ದರು.