ಕೋಲಾರ : ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯದಿದ್ದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಇರಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಕೆಲಸ ಆಗುತ್ತಿದೆ. ಇದರಿಂದ ಕಾಂಗ್ರೆಸ್ಗೆ ಅನುಕೂಲವಾಗಲಿದೆ. ಬಿಜೆಪಿಯವರು, ವಿಪಕ್ಷದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜನರ ರಕ್ಷಣೆ ಮಾಡಬೇಕು. ಆದರೆ, ಜನರನ್ನು ರಕ್ಷಿಸದೆ, ಅಧಿಕಾರಕ್ಕಾಗಿ ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.