ಕೋಲಾರ :ಅಂಗಡಿಯ ಹಿಂಬದಿಯ ಗೋಡೆ ಕೊರೆದು ಲಕ್ಷಾಂತರ ರೂ. ಮೌಲ್ಯದ ಮೊಬೈಲ್ಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ನಗರದ ಎಂ ಜಿ ರಸ್ತೆಯಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಗುಂಡಮನತ್ತ ಗ್ರಾಮದ ಪುಟ್ಟಣ್ಣ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿ ಇದಾಗಿದೆ. ಸುಮಾರು ಎರಡು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮೊಬೈಲ್ಗಳು ಕಳ್ಳತನವಾಗಿವೆ. ಕಳೆದ ರಾತ್ರಿ ಕಳ್ಳತನ ಜರುಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಶಾಪ್ ತೆರೆದಾಗ ಘಟನೆ ಬೆಳಕಿಗೆ ಬಂದಿದೆ.
ಗೋಡೆ ಕೊರೆದು ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಖದೀಮರು - ಗೋಡೆ ಕೊರೆದು ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಕಳ್ಳರು
ಲಾಕ್ಡೌನ್ನಲ್ಲಿ ವ್ಯಾಪಾರ ಇಲ್ಲದೆ ಸಂಕಷ್ಟದಲ್ಲಿದ್ದಾಗ ಯಾರೋ ದುಷ್ಕರ್ಮಿಗಳು ಇಂತಹ ಕೆಲಸ ಮಾಡಿದ್ದಾರೆ ಎಂದು ಮೊಬೈಲ್ ಅಂಗಡಿ ಮಾಲೀಕ ಅಳಲು ತೋಡಿಕೊಂಡಿದ್ದಾರೆ..

ಮೊಬೈಲ್ ಅಂಗಡಿ ಕಳ್ಳತನ
ಗೋಡೆ ಕೊರೆದು ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಖದೀಮರು
ಸಾಲ-ಸೂಲ ಮಾಡಿ ಅಂಗಡಿ ಮಾಡಿದ್ದೆ. ಲಾಕ್ಡೌನ್ನಲ್ಲಿ ವ್ಯಾಪಾರ ಇಲ್ಲದೆ ಸಂಕಷ್ಟದಲ್ಲಿದ್ದಾಗ ಯಾರೋ ದುಷ್ಕರ್ಮಿಗಳು ಇಂತಹ ಕೆಲಸ ಮಾಡಿದ್ದಾರೆ ಎಂದು ಮೊಬೈಲ್ ಅಂಗಡಿ ಮಾಲೀಕ ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.