ಕೋಲಾರ: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಘಟನೆಯಲ್ಲಿ ಭಾಗಿಯಾಗಿರುವವರು ಭಯೋತ್ಪಾದಕರು ಎಂದು ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ಗಲಭೆಯಲ್ಲಿ ಭಾಗಿಯಾದವರು ಭಯೋತ್ಪಾದಕರು: ಸಂಸದ ಎಸ್.ಮುನಿಸ್ವಾಮಿ - ಸಂಸದ ಎಸ್.ಮುನಿಸ್ವಾಮಿ
ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದಿರುವ ಕೃತ್ಯ ಘನಘೋರವಾದ್ದದ್ದು. ಕಾನೂನು ಕೈಗೆತ್ತಿಕೊಂಡು ಉದ್ದೇಶಪೂರ್ವಕವಾಗಿ, ಪೂರ್ವನಿಯೋಜಿತವಾಗಿ ಕೃತ್ಯವನ್ನ ಎಸಗಿದ್ದಾರೆಂದು ಸಂಸದ ಎಸ್.ಮುನಿಸ್ವಾಮಿ ಅಭಿಪ್ರಾಯಪಟ್ಟರು.
ಇಂದು ಕೋಲಾರದಲ್ಲಿ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದಿರುವ ಕೃತ್ಯ ಘನಘೋರವಾದದ್ದು. ಇಂತಹವರು ನಮ್ಮ ಭಾರತೀಯ ಪ್ರಜೆಗಳಾಗಲು ಸಾಧ್ಯವೇ ಇಲ್ಲ. ಸೋಷಿಯಲ್ ಮೀಡಿಯಾಗಳಲ್ಲಿನ ಪೋಸ್ಟರ್ಗಳ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವುದರೊಂದಿಗೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಕಾನೂನು ಕೈಗೆತ್ತಿಕೊಂಡು ಉದ್ದೇಶಪೂರ್ವಕವಾಗಿ, ಪೂರ್ವನಿಯೋಜಿತವಾಗಿ ಕೃತ್ಯ ಎಸಗಿದ್ದಾರೆಂದು ಅಭಿಪ್ರಾಯಪಟ್ಟರು. ಘಟನೆಯಲ್ಲಿ ಭಾಗಿಯಾಗಿರುವ ಎಸ್ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಥವಾ ಯಾರೇ ಆಗಿದ್ದರು ಅವರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಅವರು ಆಗ್ರಹಿಸಿದ್ರು.
ಉತ್ತರಪ್ರದೇಶದ ಮಾದರಿಯಲ್ಲಿ ಗಲಬೆಗಳಲ್ಲಿ ಭಾಗಿಯಾಗುವಂತಹವರು ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತಹ ಕೆಲಸ ಕರ್ನಾಟಕದಲ್ಲಿ ಅಗಬೇಕು. ಅಲ್ಲದೆ ಇಂತಹ ಕೃತ್ಯ ಎಸಗಿದವರಿಗೆ ಕ್ಷಮೆ ಇರಬಾರದು. ಜೊತೆಗೆ ಇಂತಹವರಿಗೆ ವಿರೋಧ ಪಕ್ಷದವರಾಗಲಿ, ಯಾರೇ ಅಗಲಿ ಬೆಂಬಲ ನೀಡಬಾರದು ಎಂದರು.