ಕೋಲಾರ: ಬೆಂಗಳೂರಿನತ್ತ ಹೊರಟಿದ್ದ ಟ್ರ್ಯಾಕ್ಟರ್ಗಳನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆ, ಆಕ್ರೋಶ ವ್ಯಕ್ತಪಡಿಸಿರುವ ರೈತರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು.
ಕೋಲಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೋಲಾರ ಜಿಲ್ಲೆಯ ಬಂಗಾರಪೇಟೆ, ಮುಳಬಾಗಿಲಿನ ತಂಬಿಹಳ್ಳಿ ಗೇಟ್, ಕೋಲಾರ, ರಾನಸಂದ್ರ ಬಾರ್ಡರ್ ನಲ್ಲಿ ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದಿದ್ದಾರೆ. ರೈತ ಸಂಘದ ಪುಟ್ಟಣ್ಣಯ್ಯ ಬಣದ ಸದಸ್ಯರು, ಸಿಐಟಿಯು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೇರಿದಂತೆ ವಿವಿಧ ರೈತಪರ ಸಂಘಟನೆಗಳಿಂದ ಟ್ರ್ಯಾಕ್ಟರ್ಗಳ ಮೂಲಕ ಬೆಂಗಳೂರಿಗೆ ರ‍್ಯಾಲಿ ಹೊರಟಿದ್ದರು.
ಇದಕ್ಕೂ ಮುಂಚೆ ನಗರದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಹೊಸಕೋಟೆ ಟೋಲ್ ಮುಖಾಂತರ ಬೆಂಗಳೂರಿಗೆ ಹೊರಟಿದ್ದರು. ಇನ್ನು ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ಪೆರೇಡ್ ಹಿನ್ನೆಲೆ ಕೋಲಾರ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದರೊಂದಿಗೆ ಕೋಲಾರದಿಂದ ಬರುವ ಟ್ರ್ಯಾಕ್ಟರ್ಗಳನ್ನು ತಡೆಯಲು ಸಿದ್ದತೆ ಮಾಡಿಕೊಂಡಿರುವ ಪೊಲೀಸರು, ಕೋಲಾರದ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.