ಕೋಲಾರ:ಜುಲೈ 22 ತಾರೀಖಿನಿಂದ ಕೋಲಾರದ ಸರ್ಕಾರಿ ಜಿಲ್ಲಾಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ನಗರದ ಇಟಿಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಕಟ್ಟಡ ಪರಿಶೀಲನೆ ನಡೆಸಿದ್ರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋಲಾರ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ ಇದುವರೆಗೆ ಕೋವಿಡ್ ಸೋಂಕಿತರಿಗಾಗಿ ಸುಮಾರು 200 ಹಾಸಿಗೆಗಳನ್ನು ಜಿಲ್ಲಾಸ್ಪತ್ರೆಯಲ್ಲಿ ನಿಗದಿಪಡಿಸಲಾಗಿದೆ. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ.
ಈ ಮೂಲಕ 450 ಹಾಸಿಗೆಗಳಿಗೆ ಹೆಚ್ಚಳ ಮಾಡಿದ್ದು, ಇದುವರೆಗೂ 138 ಕೊರೊನಾ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿದ್ದಾರೆ. ಇವರಲ್ಲಿ ಇಂದು ಸುಮಾರು 52 ಗುಣಮುಖರಾದವರನ್ನು ಬಿಡುಗಡೆ ಮಾಡಲಾಗುತ್ತಿದೆ.