ಕರ್ನಾಟಕ

karnataka

ETV Bharat / state

ಬೈಕ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ.. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು - ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ಬಂಗಾರಪೇಟೆ ತಾಲೂಕಿನ ಹೂವರಸನಹಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರು ಸಾವನ್ನಪ್ಪಿರುವ ಘಟನೆ ನಡೆದಿದೆ.

road accident in Kolar
ಬೈಕ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ

By

Published : Sep 10, 2022, 7:01 AM IST

ಕೋಲಾರ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ಬಂಗಾರಪೇಟೆ ತಾಲೂಕಿನ ಹೂವರಸನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಕೋಡಗುರ್ಕಿ ಕಾಲೋನಿಯ ಸುಬ್ರಮಣಿ (30) ಹಾಗೂ ಯಲ್ಲಪ್ಪ (29) ಮೃತರು. ಟ್ರ್ಯಾಕ್ಟರ್​​ಗೆ ಒಂದು ಕಡೆ ಲೈಟ್ ಇಲ್ಲದೆ ಚಾಲನೆ ಮಾಡುತ್ತಿದ್ದುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಬೂದಿಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಗಂಡನಿಂದ ಮನೆಗೆ ಗಂಡಾಂತರ ಎಂದು ಹಣ ಪೀಕಿದ್ದ ಕಳ್ಳ ಜ್ಯೋತಿಷಿ, ಬಾಲಕನ ಬಂಧನ

ABOUT THE AUTHOR

...view details