ಕೋಲಾರ:ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಈಜಲು ಬಂದಿದ್ದ ಇಬ್ಬರು ಯುವಕರು ನೀರುಪಾಲು - lake
ಬೆಂಗಳೂರಿನಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕೊಪ್ಪ ಕೆರೆಗೆ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ.
ಇಬ್ಬರು ಯುವಕರು ಸಾವು
ಬೆಂಗಳೂರಿನಿಂದ ಮೂವರು ಯುವಕರು ಕೆರೆಯಲ್ಲಿ ಈಜಲು ಬಂದಿದ್ದರು. ಈ ವೇಳೆ 17 ವರ್ಷದ ಅಶ್ವಕ್ ಅಹಮದ್(17) ಮತ್ತು ಅಜಾಮುದ್ದೀನ್ ಶರೀಪ್ (18) ಎಂಬುವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸದ್ಯ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆಯಲ್ಲಿ ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.