ಕೋಲಾರ:ಅವೈಜ್ಞಾನಿಕವಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಅವೈಜ್ಞಾನಿಕವಾಗಿ ಗುಡ್ಡಗಾಡು ಓಟದ ಸ್ಪರ್ಧೆ ಆಯೋಜನೆ: ಪೋಷಕರ ಆರೋಪ
ಕೋಲಾರದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ, ರಾಜ್ಯಮಟ್ಟದ 55 ನೇ ಗುಡ್ಡಗಾಡು ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಫರ್ಧೆಯಲ್ಲಿ, ವಿವಿಧೆಡೆಯಿಂದ ಸುಮಾರು 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಆದರೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಪೋಷಕರು, ಆಯೋಜಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ಕೋಲಾರದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ, ರಾಜ್ಯಮಟ್ಟದ 55 ನೇ ಗುಡ್ಡಗಾಡು ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಫರ್ಧೆಯಲ್ಲಿ ವಿವಿಧೆಡೆಯಿಂದ ಸುಮಾರು 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಆದರೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಪೋಷಕರು ಆಯೋಜಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಗುಡ್ಡಗಾಡು ಸ್ಪರ್ಧೆ ಎಂದರೆ ಹಳ್ಳಿ ಭಾಗಗಳಲ್ಲಿ, ವಾಹನ ದಟ್ಟಣೆ ಇಲ್ಲದ ಕಡೆಗಳಲ್ಲಿ ಆಯೋಜನೆ ಮಾಡಬೇಕು. ಆದರೆ ಇಲ್ಲಿನ ಆಯೋಜಕರು, ಅನೇಕ ಗುಂಡಿಗಳಿರುವ ರಸ್ತೆಗಳಲ್ಲಿ, ವಾಹನ ದಟ್ಟಣೆ ಹೆಚ್ಚಾಗಿರುವ ಜಾಗದಲ್ಲಿ ಆಯೋಜನೆ ಮಾಡಿದ್ದಾರೆ. ಇದರಿಂದ ಕ್ರೀಡಾಪಟುಗಳಿಗೆ ಸಮಸ್ಯೆಯಾಗಿತ್ತು. ಜೊತೆಗೆ ಸ್ಪರ್ಧೆೆಯಲ್ಲಿ ಭಾಗವಹಿಸಿದ್ದವರಿಗೆ ಸಮರ್ಪಕವಾಗಿ ಕುಡಿಯಲು ನೀರು ಇಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.