ಕರ್ನಾಟಕ

karnataka

ETV Bharat / state

ವರ್ತೂರು ಪ್ರಕಾಶ್ ಅಪಹರಣ, ಹಲ್ಲೆ ಖಂಡನೀಯ: ಸಂಸದ ಮುನಿಸ್ವಾಮಿ - ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ

ಯಾವುದೇ ರಾಜಕಾರಣಿಯ ಅಪಹರಣ, ಹಲ್ಲೆ ಪ್ರಕರಣಗಳು ಖಂಡನೀಯ ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದ್ದಾರೆ.

MP Muniswami
ಸಂಸದ ಎಸ್. ಮುನಿಸ್ವಾಮಿ

By

Published : Dec 3, 2020, 5:31 PM IST

ಕೋಲಾರ:ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನು ಸಂಸದ ಎಸ್. ಮುನಿಸ್ವಾಮಿ ಖಂಡಿಸಿದ್ದಾರೆ.

ವರ್ತೂರು ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆ ಖಂಡನೀಯ: ಮುನಿಸ್ವಾಮಿ

ಇಂದು ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮಗಳೊಂದಿಗೆ ಮಾತನಾಡಿ, ಅಪಹರಣ ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನು ಪತ್ತೆ ಹಚ್ಚಬೇಕು. ಜೊತೆಗೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ ಎಂದರು. ಅಲ್ಲದೇ ಫೋನ್​ ಮೂಲಕ ವರ್ತೂರು ಪ್ರಕಾಶ್ ಅವರೊಂದಿಗೆ ಮಾತನಾಡಿ, ಅವರ ಆರೋಗ್ಯದ ಕುರಿತು ವಿಚಾರಿಸಿದ್ದೇನೆ ಎಂದು ತಿಳಿಸಿದರು.

ABOUT THE AUTHOR

...view details