ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಬಂಧಿಸಿರುವ ಪೊಲೀಸರುತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಬೆಂಗಳೂರು ಮೂಲದ ಓರ್ವ ಬೌನ್ಸರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೊಬ್ಬನನ್ನ ಗುಪ್ತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ 13 ಜನರನ್ನ ವಿಚಾರಣೆ ನಡೆಸಿರುವ ಪೊಲೀಸರು, ಇನ್ನೆರಡು ದಿನದಲ್ಲಿ ಆರೋಪಿಗಳನ್ನ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.