ಕೋಲಾರ:ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಎ.1 ಆರೋಪಿ ಕವಿರಾಜ್ ಎಂಬುವವನನ್ನು ಬಂಧಿಸಲಾಗಿದೆ ಎಂದು ನಗರದಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿಕೆ ನೀಡಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಪ್ರಕರಣದ ಎ.1 ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ ಎಂದರು. ಇನ್ನು ಆರೋಪಿ ಕವಿರಾಜ್ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ, 2006 ರಿಂದ ಈಚೆಗೆ ಸುಮಾರು ಹತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವೆಡೆ ರೌಡಿ ಶೀಟರ್ ಆಗಿದ್ದಾನೆ ಎಂದರು. ಇನ್ನು ಎ.1 ಆರೋಪಿಯಿಂದ ಇತರ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಿದ್ದು, ಇನ್ನೆರಡು ದಿನಗಳಲ್ಲಿ ಬಂಧಿಸುವುದಾಗಿ ಹೇಳಿದರು.