ಕೋಲಾರ: ತಮಿಳು ನಾಮಫಲಕಗಳನ್ನು ತೆಗೆಯುವಂತೆ ಆಗ್ರಹಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ತಮಿಳು ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರದಲ್ಲಿ ಜರುಗಿದೆ.
ತಮಿಳು ನಾಮಫಲಕ ತೆಗೆಯುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ - removal of Tamil Nameplate
ಗಡಿಯಲ್ಲಿರುವ ತಮಿಳು, ಹಿಂದಿ ಬೋರ್ಡ್ ತೆಗೆಯಬೇಕು. ಬ್ಯಾಂಕ್ಗಳಲ್ಲಿ ಕನ್ನಡದ ಚಲನ್ ನೀಡಬೇಕು, ಬ್ಯಾಂಕ್ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಿದರು..
![ತಮಿಳು ನಾಮಫಲಕ ತೆಗೆಯುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ Vatal Nagaraj](https://etvbharatimages.akamaized.net/etvbharat/prod-images/768-512-12418105-thumbnail-3x2-lek.jpg)
ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ಬಸ್ ನಿಲ್ದಾಣ ಸೇರಿದಂತೆ ತಮಿಳು ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಮಿಳು ನಾಮಫಲಕಗಳಿಗೆ ಮಸಿ ಬಳಿಯದಂತೆ ತಮಿಳು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.
ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನ ತಿಳಿಗೊಳಿಸಿ, ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಈ ಕುರಿತು ಮಾತನಾಡಿದ ವಾಟಾಳ್ ನಾಗರಾಜ್ ಅವರು, ಗಡಿಯಲ್ಲಿರುವ ತಮಿಳು, ಹಿಂದಿ ಬೋರ್ಡ್ ತೆಗೆಯಬೇಕು. ಬ್ಯಾಂಕ್ಗಳಲ್ಲಿ ಕನ್ನಡದ ಚಲನ್ ನೀಡಬೇಕು, ಬ್ಯಾಂಕ್ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಿದರು.