ಕರ್ನಾಟಕ

karnataka

ETV Bharat / state

ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ನೇಣು ಬಿಗಿದುಕೊಂಡು ಆತ್ಮಹತ್ಯೆ - ಆತ್ಮಹತ್ಯೆ ಸುದ್ದಿ

ಕೋಲಾರ ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇವರ ಸಾವಿಗೆ ಕಾರಣ ಏನೆಂದು ತಿಳಿದುಬಂದಿಲ್ಲ.

suicide
suicide

By

Published : Jun 22, 2021, 10:30 PM IST

ಕೋಲಾರ:ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕೋಲಾರಮ್ಮ‌ ಬಡಾವಣೆಯಲ್ಲಿ ಈ ಘಟನೆ ಜರುಗಿದ್ದು, ಕಾವ್ಯಾ (32) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಲಾರ ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಯುವತಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ನಿನ್ನೆ ರಾತ್ರಿಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details