ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವೀಕೆಂಡ್ ಕರ್ಪ್ಯೂ ವಿಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಕೋಲಾರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೋಲಾರದಲ್ಲಿ ಶನಿವಾರದಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ಡೌನ್ ಜಾರಿ ಮಾಡಿರುವುದಾಗಿ ತಿಳಿಸಿದ್ರು.
ಶನಿವಾರದಿಂದ ಸೋಮವಾರ ಬೆಳಗ್ಗೆ 10 ಗಂಟೆಯವರೆಗೆ ಲಾಕ್ಡೌನ್ ಎಂದ ಸಚಿವ ಲಿಂಬಾವಳಿ ಕೋಲಾರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದು, 300 ಪಾಸಿಟಿವ್ ಪ್ರಕರಣಗಳು ಪ್ರತಿನಿತ್ಯ ಕಂಡು ಬರುತ್ತಿದೆ. ಜಿಲ್ಲೆಯಲ್ಲಿ ಸುಮಾರು ಆರು ಸಾವಿರ ಪ್ರಕರಣಗಳಿದ್ದು, ಶುಕ್ರವಾರದವರೆಗೂ ರಾಜ್ಯ ಸರ್ಕಾರದ ನಿಯಮಾವಳಿಗಳು ಎಂದಿನಂತೆ ಇರಲಿದೆ. ಜಿಲ್ಲೆಯಲ್ಲಿ ಎಲ್ಲರ ಅಭಿಪ್ರಾಯದಂತೆ ಶನಿವಾರದಿಂದ ಸೋಮವಾರ ಹತ್ತು ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ಗೆ ಕರೆ ನೀಡಲಾಗಿದೆ ಎಂದರು.
ಇನ್ನು ಸಂಸದರು, ಅಧಿಕಾರಿಗಳ ಶ್ರಮದ ಫಲವಾಗಿ ಗ್ರಾಮಗಳಲ್ಲಿ ಟಾಸ್ಕ್ ಫೋರ್ಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದು ಹಾಗೇಯೇ ಮುಂದುವರೆಯಬೇಕೆಂದರು.