ಕೋಲಾರ:ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೈ.ವೈ.ನಂಜೇಗೌಡ ಅವರ ನೇತೃತ್ವದಲ್ಲಿ ಸುಮಾರು 55 ಸಾವಿರ ಕುಟುಂಬಗಳಿಗೆ ಗೋಧಿ ಹಿಟ್ಟು ಹಾಗೂ ತರಕಾರಿ ನೀಡಲಾಯಿತು. ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ರು.
ಈ ವೇಳೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಭಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ವಹಿಸಬೇಕಾಗಿತ್ತು. ಆದ್ರೆ ಬರೀ ಮಾಧ್ಯಮಗಳಲ್ಲಿ ಮಾತ್ರ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಚಾಟಿ ಬೀಸಿದ್ರು. ಅಲ್ಲದೆ ಸರ್ಕಾರ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಪ್ಲಾನ್ ಮಾಡಿಕೊಂಡಿಲ್ಲ ಎಂದ ಅವರು, ವೈದ್ಯರನ್ನ ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ರಕ್ತದ ಮಾದರಿಗಳನ್ನ ಪರೀಕ್ಷಿಸುವಂತಹ ಸೌಲಭ್ಯಗಳನ್ನ ಒದಗಿಸಬೆಕು ಎಂದರು.