ಕೋಲಾರ: ಏಕಾಏಕಿ ಕೆಸಲದಿಂದ ತೆಗೆದ ಹಿನ್ನಲೆ ನೂರಾರು ಕಾರ್ಮಿಕರು ಕಂಪನಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ಜರುಗಿದೆ.
ಏಕಾಏಕಿ ಕೆಲಸದಿಂದ ತೆಗೆದ ಕಂಪನಿ; ಕಾರ್ಮಿಕರ ಉಗ್ರ ಪ್ರತಿಭಟನೆ - ಕೋಲಾರ ಸುದ್ದಿ
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಸ್ವಸ್ಥಿಡ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಯೂನಿಟ್ ಕಂಪನಿಯವರು ಏಕಾಏಕಿ ನೂರಾರು ಕಾರ್ಮಿಕರನ್ನ ಕೆಲಸದಿಂದ ತೆಗೆದು ಹಾಕಿದ್ದರಿಂದ ಆಕ್ರೋಶಗೊಂಡ ಕಾರ್ಮಿಕರು ಉಗ್ರ ಪ್ರತಿಭಟನೆ ನಡೆಸಿದರು.
ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಸ್ವಸ್ಥಿಡ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಯೂನಿಟ್ ಕಂಪನಿಯವರು ಏಕಾಏಕಿ ನೂರಾರು ಕಾರ್ಮಿಕರನ್ನು ಕೆಲಸದಿಂದ ತೆಗೆದ ಪರಿಣಾಮ ಪ್ರತಿಭಟನೆ ಮಾಡಲಾಯಿತು. ಕೊರೊನಾ ಮಹಾಮಾರಿಯಿಂದಾಗಿ ಹೊರರಾಜ್ಯದ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಿದ್ದರಿಂದ ಹೆಚ್ಚುವರಿಯಾಗಿ ಸ್ಥಳೀಯ ಕಾರ್ಮಿಕರನ್ನು ಕಂಪನಿ ನೇಮಕ ಮಾಡಿಕೊಂಡಿತ್ತು.
ಇದೀಗ ಲಾಕ್ಡೌನ್ ಸಡಿಲಿಕೆ ನಂತರ ಹೊರರಾಜ್ಯದಿಂದ ಕಾರ್ಮಿಕರನ್ನು ಕರೆಸಿಕೊಂಡಿದ್ದು, ಇಂದು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆಯಲಾಗಿದೆ. ಈ ಹಿನ್ನಲೆ ಕಂಪನಿಯ ಕ್ರಮ ಖಂಡಿಸಿ, ಕಂಪನಿ ವಿರುದ್ಧ ಧಿಕ್ಕಾರ ಕೂಗಿ ಕಾರ್ಮಿಕರು ಅಕ್ರೋಶ ವ್ಯಕ್ತಪಡಿಸಿದರು.