ಕರ್ನಾಟಕ

karnataka

ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆ... ಕೋಲಾರದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಕಾರ್ಯಾಗಾರ - workshop for kolar school hm

ಎಸ್​ಎಸ್​ಎಲ್​ಸಿ ಪರೀಕ್ಷೆ ಹತ್ತಿರವಾಗುತ್ತಿರುವ ಹಿನ್ನಲೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೋಲಾರ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

Workshop for Kolar Schools HM!
ಕೋಲಾರ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕಾರ್ಯಾಗಾರ!

By

Published : Feb 26, 2020, 7:02 PM IST

ಕೋಲಾರ: ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು.

ಕೋಲಾರ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕಾರ್ಯಾಗಾರ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಈ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ್​ ಅಧ್ಯಕ್ಷ ವೆಂಕಟೇಶ್ ಚಾಲನೆ ನೀಡಿದ್ರು. ಎಸ್​ಎಸ್​ಎಲ್​ಸಿ ಪರೀಕ್ಷೆ ಹತ್ತಿರವಾಗುತ್ತಿರೋ ಹಿನ್ನಲೆಯಲ್ಲಿ ಕಾರ್ಯಾಗಾರವನ್ನ ಆಯೋಜಿಸಲಾಗಿದ್ದು, ಮಕ್ಕಳನ್ನ ಪರೀಕ್ಷೆಗೆ ಶಿಕ್ಷಕರು ಯಾವ ರೀತಿ ಸಿದ್ಧಗೊಳಿಸಬೇಕು ಎಂಬ ಮಾಹಿತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ಟಾಟಾ ಕಂಪನಿಯವರು ಸರ್ಕಾರಿ ಪ್ರೌಢಶಾಲೆಗಳಿಗೆ ಟಾಲಫ್ ಯೋಜನೆಯಡಿ ವಿತರಿಸಿರುವ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಉಪಯೋಗಿಸುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಾಗಾರದಲ್ಲಿ ಪ್ರಭಾರ ಜಿಲ್ಲಾಧಿಕಾರಿ ದರ್ಶನ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ABOUT THE AUTHOR

...view details