ಕರ್ನಾಟಕ

karnataka

ETV Bharat / state

ಕೋಲಾರ ಹೆದ್ದಾರಿಯಲ್ಲಿ ವ್ಹೀಲಿಂಗ್​ ಹುಚ್ಚಾಟಕ್ಕೆ ಯುವತಿ ಬಲಿ; ಜೊತೆಗಿದ್ದ ಸ್ನೇಹಿತರು ಪರಾರಿ

ಬೈಕ್‌ ವ್ಹೀಲಿಂಗ್‌ನಿಂದ ಯುವತಿ ಮೃತಪಟ್ಟಿರುವ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡೆಡ್ಲಿ ವ್ಹೀಲಿಂಗ್​
ಡೆಡ್ಲಿ ವ್ಹೀಲಿಂಗ್​

By

Published : Aug 16, 2023, 10:02 PM IST

ಹೊಸಕೋಟೆ (ಕೋಲಾರ) : ಬೈಕ್​ನಲ್ಲಿ ಜಾಲಿ ರೈಡ್ ಹೊರಟಿದ್ದ ಯುವಕ-ಯುವತಿಯರು ಬೈಕ್ ವೀಲಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ಹೆದ್ದಾರಿಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ಘಟನೆ ನಡೆದಿದೆ.

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪು ಸುಮಾರು 20ಕ್ಕೂ ಹೆಚ್ಚು ಬೈಕ್​ಗಳಲ್ಲಿ ಕೋಲಾರದ ಕಾಫಿ ಡೇ ಕಡೆ ಜಾಲಿ ರೈಡ್ ಹೊರಟಿದ್ದರು. ಯುವತಿ ಇದ್ದ ಬೈಕ್ ಅನ್ನು ಯುವಕ ವ್ಹೀಲಿಂಗ್​ ಮಾಡಿದ್ದು, ಮುಂದೆ ಹೋಗುತ್ತಿದ್ದ ಬೇರೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಮೂವರು ಕೆಳಗಡೆ ಬಿದ್ದಿದ್ದಾರೆ. ಕೆಳಬಿದ್ದ ಓರ್ವ ಯುವತಿಯ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಮತ್ತಿಬ್ಬರು ಗಾಯಾಳುಗಳನ್ನು ಹೊಸಕೋಟೆಯ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿದೆ. ಅಪಘಾತವಾಗುತ್ತಿದಂತೆ ಜೊತೆಗೆ ಬಂದಿದ್ದ ಸ್ನೇಹಿತರ ಗುಂಪು ನಮಗೂ ಘಟನೆಗೂ ಯಾವುದೇ ಸಂಬಂಧವಿಲ್ಲದಂತೆ ಬೈಕ್‌ಸಮೇತ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೈಕ್ ವ್ಹೀಲಿಂಗ್- ಯುವಕ ಸಾವು : ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪದಲ್ಲಿ ಬೈಕ್ ವ್ಹೀಲಿಂಗ್ ಮಾಡುವ ಸಂದರ್ಭದಲ್ಲಿ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆ. 15 ಮಂಗಳವಾರದಂದು ಜರುಗಿತ್ತು. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿತ್ತು. ಬೆಂಗಳೂರು ಮೂಲದ ಆದಿಲ್ (25) ಮೃತಪಟ್ಟ ಯುವಕ.

ಸ್ವಾತಂತ್ರ್ಯ ದಿನಾಚರಣೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ನಂದಿಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಲು ಹೋಗಿದ್ದಾಗ ಆದಿಲ್​ ದಾರುಣವಾಗಿ ಸಾವನ್ನಪ್ಪಿದ್ದನು. ವ್ಹೀಲಿಂಗ್ ಹಾವಳಿಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವ್ಹೀಲಿಂಗ್ : ಬೆಂಗಳೂರು ಕಡೆ ಹೋಗುತ್ತಿದ್ದ ಇನ್ನೋವಾ ಕಾರಿನ ಚಾಲಕ ಶಿಂಷಾ ನದಿ ಸಮೀಪ ಸರ್ವಿಸ್ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಉಬ್ಬು ಬಳಿ ನಿಧಾನವಾಗಿ ಚಾಲನೆ ಮಾಡಿದ್ದು, ಮದ್ದೂರು ಪಟ್ಟಣದ ಕೊಲ್ಲಿ ವೃತ್ತದಿಂದ ನಿಡಘಟ್ಟದ ಕಡೆಗೆ ಎರಡು ಬೈಕ್​ಗಳಲ್ಲಿ ಡೆಡ್ಲಿ ವ್ಹೀಲಿಂಗ್​ ಮಾಡಿಕೊಂಡು ಬಂದ ಯುವಕರು​ ನಿಯಂತ್ರಣ ತಪ್ಪಿ ಇನ್ನೋವಾ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರು. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ :ವ್ಹೀಲಿಂಗ್ ವೇಳೆ ಮತ್ತೊಂದು ಬೈಕ್​ಗೆ ಡಿಕ್ಕಿ.. ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ- Video Viral

ABOUT THE AUTHOR

...view details