ಕೊಪ್ಪಳ:ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 14,705 ಕ್ಕೇರಿಕೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ 100 ಕೊರೊನಾ ಸೋಂಕಿತರು ಪತ್ತೆ ಕೊಪ್ಪಳ ತಾಲೂಕಿನಲ್ಲಿ 51, ಗಂಗಾವತಿ ತಾಲೂಕಿನಲ್ಲಿ 23, ಕುಷ್ಟಗಿ ತಾಲೂಕಿನಲ್ಲಿ 11 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 15 ಪ್ರಕರಣ ಸೇರಿ ಜಿಲ್ಲೆಯಲ್ಲಿ ಒಟ್ಟು 100 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಒಟ್ಟು 460 ಸಕ್ರೀಯ ಪ್ರಕರಣಗಳಿದ್ದು, 454 ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. ಉಳಿದಂತೆ 90 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ 23 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ ಒಟ್ಟು 13,889 ಜನರು ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.