ಕೊಪ್ಪಳ: ಜಿಲ್ಲೆಯಲ್ಲಿ ಇಂದು 107 ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2329ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಕೊಪ್ಪಳದಲ್ಲಿ ಇಂದು 107 ಕೊರೊನಾ ಪ್ರಕರಣಗಳು ಪತ್ತೆ ಗಂಗಾವತಿ 47, ಕೊಪ್ಪಳ ತಾಲೂಕಿ 36, ಕುಷ್ಟಗಿ 11 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 13 ಪ್ರಕರಣಗಳು ದೃಢಪಟ್ಟಿವೆ. ಇಂದು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 48 ಜನರು ಮೃತಪಟ್ಟಿದ್ದಾರೆ.
ಕೊಪ್ಪಳದಲ್ಲಿ ಇಂದು 107 ಕೊರೊನಾ ಪ್ರಕರಣಗಳು ಪತ್ತೆ ಇಂದು 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1218 ಜನರು ಗುಣಮುಖರಾಗಿದ್ದಾರೆ. 702 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 33,004 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 30,843 ಜನರ ವರದಿ ಬಂದಿದೆ. ಇನ್ನೂ 1948 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.