ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಇಂದು 109 ಕೊರೊನಾ ಪಾಸಿಟಿವ್ ಕೇಸ್ ಪತ್ತೆ...

ಕೊಪ್ಪಳ ಜಿಲ್ಲೆಯಲ್ಲಿ ಇಂದು 109 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,602 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

koppala
ಕೊಪ್ಪಳ

By

Published : Aug 3, 2020, 7:32 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 109 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,602 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 65, ಕೊಪ್ಪಳ ತಾಲೂಕಿನಲ್ಲಿ 34, ಕುಷ್ಟಗಿ ತಾಲೂಕಿನಲ್ಲಿ 09 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 01 ಕೇಸ್ ಸೇರಿ ಇಂದು ಒಟ್ಟು 109 ಪಾಸಿಟಿವ್ ಕೇಸ್ ದೃಢಪಟ್ಟಿವೆ. ಇಂದು ಓರ್ವ ಸೋಂಕಿತ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 31 ಜನರು ಸಾವನ್ನಪ್ಪಿದ್ದಾರೆ ಎಂದರು.

ಇಂದು 52 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 881 ಜನರು ಗುಣಮುಖರಾಗಿದ್ದಾರೆ. 318 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 27,413 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26,751 ಜನರ ವರದಿ ಬಂದಿದೆ. ಇನ್ನೂ 842 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details