ಗಂಗಾವತಿ:ಇಲ್ಲಿನ ಜಯನಗರದ ಎಸ್ಟಿ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಒಂಭತ್ತು ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಮತ್ತೀಗ 11 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಒಂಭತ್ತರ ಬೆನ್ನಲ್ಲೇ ಹಾಸ್ಟೆಲ್ನಲ್ಲಿ ಮತ್ತೆ 11 ವಿದ್ಯಾರ್ಥಿಗಳಿಗೆ ಕೊರೊನಾ: ಗಂಗಾವತಿಯಲ್ಲಿ ಆತಂಕ - corona positive case
ಜಯನಗರದ ಎಸ್ಟಿ ವಿದ್ಯಾರ್ಥಿಗಳ ವಸತಿ ನಿಲಯದ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಗಂಗಾವತಿಯಲ್ಲಿ ಆತಂಕ ಮನೆಮಾಡಿದೆ.
ಎಸ್ಟಿ ವಿದ್ಯಾರ್ಥಿಗಳ ವಸತಿ ನಿಲಯ
ಮೊದಲ ಬಾರಿಗೆ ಹಾಸ್ಟೆಲ್ನ ಆರು ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವಸತಿ ನಿಲಯದ ಎಲ್ಲಾ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವೈದ್ಯಕೀಯ ವರದಿ ಬಂದಿದ್ದು, ಮತ್ತೆ ಹನ್ನೊಂದು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಸಿಕೊಂಡಿದೆ.
ಇದೀಗ ಹಾಸ್ಟೆಲ್ನ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಂತಾಗಿದ್ದು. ಇನ್ನೂ ಕೆಲ ವಿದ್ಯಾರ್ಥಿಗಳ ವೈದ್ಯಕೀಯ ವರದಿ ಬರುವುದು ಬಾಕಿ ಇದೆ.