ಕೊಪ್ಪಳ:ಜಿಲ್ಲೆಯಲ್ಲಿ ಇಂದು 133 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,086ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಗಂಗಾವತಿ ತಾಲೂಕಿನಲ್ಲಿ 62, ಕೊಪ್ಪಳ ತಾಲೂಕಿನಲ್ಲಿ 49, ಕುಷ್ಟಗಿ ತಾಲೂಕಿನಲ್ಲಿ 13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 09 ಪ್ರಕರಣ ಸೇರಿ ಇಂದು ಒಟ್ಟು 133 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 92 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 116 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2799 ಜನರು ಗುಣಮುಖರಾಗಿದ್ದಾರೆ. 901 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 42,777 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 41,551 ಜನರ ವರದಿ ಬಂದಿದೆ. ಇನ್ನೂ 1214 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.