ಗಂಗಾವತಿ/ಕಾರವಾರ/ರಾಯಚೂರು: ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ ಗಂಗಾವತಿ ತಾಲೂಕಿನಾದ್ಯಂತ ಡಿ.18ರಿಂದ 22ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ್ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿರುವ ಹಿನ್ನೆಲೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಿರಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಹಾಗಾಗಿ ತಾಲೂಕಿನಲ್ಲಿ ಯಾವುದೇ ಮೆರವಣಿಗೆ, ಸಂಭ್ರಮ ಆಚರಣೆ, ವಿಚಾರಗೋಷ್ಠಿ, ಸಮಾರಂಭ, ಕಾರ್ಯಾಗಾರ, ಸಭೆ ನಿಷೇಧಿಸಲಾಗಿದೆ.
144 ಸೆಕ್ಷನ್ ಅಡಿ ನಿಷೇಧಾಜ್ಞೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಪ್ರತಿಭಟನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರವಾರ ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್, ಆಟೋ ಸಂಚಾರ ಸಹ ಎಂದಿನಂತೆ ಇದೆ. ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿದೆ.
ಪೌರತ್ವ ತಿದ್ದು ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.