ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಡಿ. 22ರವರೆಗೆ 144 ಸೆಕ್ಷನ್​​​​ ಜಾರಿ - ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಆದೇಶ

ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಾದ್ಯಂತ 144 ಸೆಕ್ಷನ್ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

KN_KPL_01_20_NISHEDHAGNE_MUNDUVARIKE_VISUALS_7202284
ಕೊಪ್ಪಳದಲ್ಲಿ ಡಿ.22 ರವರೆಗೆ 144 ಸೆಕ್ಷನ್ ಜಾರಿ: ಡಿ.ಸಿ. ಸುನಿಲ್ ಕುಮಾರ್ ಆದೇಶ

By

Published : Dec 20, 2019, 9:50 AM IST

ಕೊಪ್ಪಳ:ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಾದ್ಯಂತ 144 ಸೆಕ್ಷನ್ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 22ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಸೆಂಬರ್ 21ರಂದು ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತ್ತೆ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


ABOUT THE AUTHOR

...view details