ಕರ್ನಾಟಕ

karnataka

ETV Bharat / state

ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ: ಮೈಸೂರು, ಕೊಪ್ಪಳದಲ್ಲಿ 144 ಸೆಕ್ಷನ್ ಜಾರಿ - 144 section imposed in mysore

ಹೈಕೋರ್ಟ್​ನಲ್ಲಿ ಹಿಜಾಬ್ ಕುರಿತು ಇಂದು ಮಹತ್ವದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಮತ್ತು ಕೊಪ್ಪಳದಲ್ಲಿ ಇಂದಿನಿಂದ ‌6 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ.

mysore and koppal
ಮೈಸೂರು, ಕೊಪ್ಪಳದಲ್ಲಿ 144 ಸೆಕ್ಷನ್ ಜಾರಿ

By

Published : Mar 15, 2022, 10:10 AM IST

ಮೈಸೂರು/ಕೊಪ್ಪಳ: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್​ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆ ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ‌6 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರದಲ್ಲಿ ಮಾ.15ರ ಬೆಳಿಗ್ಗೆ 6 ರಿಂದ ಮಾ.20 ಸಂಜೆ 6 ರವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಜತೆಗೆ ಶಾಲಾ - ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕರನ್ನು ಬಿಟ್ಟು ಇತರ ವ್ಯಕ್ತಿಗಳು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಜತೆಗೆ ಮೆರವಣಿಗೆ, ಪ್ರತಿಭಟನೆ ಹಾಗೂ ಸಂಭ್ರಮಾಚರಣೆಗಳಿಗೆ ನಿಷೇಧ ಹೇರಲಾಗಿದೆ.

ನಗರದ ಪ್ರಮುಖ ವೃತ್ತ, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಲ್ಲರೂ ಕಟ್ಟುನಿಟ್ಟಾಗಿ ನಿಯಮ ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ತೀರ್ಪು ಏನೇ ಬಂದರು ಅದನ್ನು ಸ್ವೀಕರಿಸುವ ಮನಸ್ಥಿತಿ ನಮ್ಮದಾಗಲಿ. ಪರ, ವಿರೋಧ ಎರಡೂ ಸಹ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಇದನ್ನು ಅರಿತು ವರ್ತಿಸೋಣ. ಬಹುಮುಖ್ಯವಾಗಿ ಯಾರು ಯಾವ ವದಂತಿಗಳಿಗೆ ಕಿವಿ ಕೊಡಬೇಡಿ. ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಿ ಎಂದು ಕಮಿಷನರ್ ಮನವಿ ಮಾಡಿದ್ದಾರೆ.

ಕೊಪ್ಪಳದಲ್ಲಿಯೂ ನಿಷೇಧಾಜ್ಞೆ:ಹಿಜಾಬ್ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆ ನಿನ್ನೆ (ಸೋಮವಾರ) ರಾತ್ರಿಯಿಂದ ಮಾ. 20ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ. 144 ಸೆಕ್ಷನ್ ಜಾರಿ ಹಿನ್ನೆಲೆ 5ಕ್ಕಿಂತ ಹೆಚ್ಚು ಜನ ಸೇರುವುದು ಜತೆಗೆ ಜಿಲ್ಲೆಯ ನಗರ ಪ್ರದೇಶದಲ್ಲಿ ವಿಜಯೋತ್ಸವ, ಮೆರವಣಿಗೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನು ಶಾಲಾ-ಕಾಲೇಜುಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಹೈಕೋರ್ಟ್​ನಲ್ಲಿ ಇಂದು ಹಿಜಾಬ್ ತೀರ್ಪು: ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ

ABOUT THE AUTHOR

...view details