ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ 147 ಸೋಂಕು ದೃಢ, 13 ಸಾವು

ಕೊಪ್ಪಳ ಜಿಲ್ಲೆಯ ಇಂದಿನ ಕೊರೊನಾ ವರದಿ ಹೀಗಿದೆ..

147 corona cases confirmed today
ಕೊಪ್ಪಳದಲ್ಲಿ ಇಂದು 147 ಸೋಂಕು ದೃಢ

By

Published : Aug 12, 2020, 10:25 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 147 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,959ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

ಗಂಗಾವತಿ ತಾಲೂಕಿನಲ್ಲಿ 44, ಕೊಪ್ಪಳ 79, ಕುಷ್ಟಗಿ 17 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 7 ಪ್ರಕರಣ ಸೇರಿ ಒಟ್ಟು 147 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 13 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 71 ಜನರು ಮೃತಪಟ್ಟಿದ್ದಾರೆ.

ಗುಣಮುಖ:

333 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1,695 ಜನರು ಗುಣಮುಖರಾಗಿದ್ದಾರೆ. 859 ಜನ ಸೋಂಕಿತರನ್ನು ಹೋಂ ಐಸೊಲೇಷನ್‌ ಮಾಡಲಾಗಿದೆ. ಉಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 36,460 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಈ ಪೈಕಿ 33,998 ಜನರ ವರದಿ ಬಂದಿದ್ದು, ಇನ್ನೂ 2,459 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details