ಕರ್ನಾಟಕ

karnataka

ETV Bharat / state

ಕೊಪ್ಪಳ‌ ಜಿಲ್ಲೆಯಲ್ಲಿ 156 ಪಾಸಿಟಿವ್ ಪ್ರಕರಣ ಪತ್ತೆ.. ಸೋಂಕಿತರ ಸಂಖ್ಯೆ 5,557 ಕ್ಕೆ ಏರಿಕೆ

ಜಿಲ್ಲೆಯಲ್ಲಿ ಇಂದು 156 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

Koppal
Koppal

By

Published : Aug 26, 2020, 8:01 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 156 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 5,557ಕ್ಕೆ ಏರಿಕೆಯಾಗಿದೆ.

ಗಂಗಾವತಿ ತಾಲೂಕಿನಲ್ಲಿ 56, ಕೊಪ್ಪಳ ತಾಲೂಕಿನಲ್ಲಿ 59, ಕುಷ್ಟಗಿ ತಾಲೂಕಿನಲ್ಲಿ 24 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಇಂದು ಒಟ್ಟು 156 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು 3 ಜನ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 129 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 127 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 3,971 ಜನರು ಗುಣಮುಖರಾಗಿದ್ದಾರೆ.

1,234 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details