ಕರ್ನಾಟಕ

karnataka

ETV Bharat / state

2 ವರ್ಷಗಳಲ್ಲಿ 16 ಸಾವಿರ ಪೊಲೀಸರ ನೇಮಕಾತಿ: ಬಸವರಾಜ ಬೊಮ್ಮಾಯಿ

ಮುಂದಿನ ಎರಡು ವರ್ಷಗಳಲ್ಲಿ ಒಟ್ಟು 16 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

basavaraja-bommai
ಬಸವರಾಜ ಬೊಮ್ಮಾಯಿ

By

Published : Feb 13, 2020, 4:27 PM IST

ಕೊಪ್ಪಳ: ಮುಂದಿನ ಎರಡು ವರ್ಷಗಳಲ್ಲಿ ಒಟ್ಟು 16 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗಂಗಾವತಿಗೆ ತೆರಳುವ ಮುನ್ನ ಕೊಪ್ಪಳ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷ 6 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಉಳಿದ ಹುದ್ದೆಗಳನ್ನು ನಂತರದ ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಇನ್ನು ಕೊಪ್ಪಳ ಡಿಎಆರ್ ಘಟಕದ ನೇಮಕಾತಿಯಲ್ಲಿ ಆಗಿರುವ ಸಮಸ್ಯೆ ನನ್ನ ಗಮನಕ್ಕೂ ಬಂದಿದೆ. ಇದನ್ನು ಸಹ ಶೀಘ್ರ ಬಗೆಹರಿಸಲಾಗುತ್ತದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜಿಲ್ಲೆಯಲ್ಲಿ ಮರಳು ದಂದೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತೇನೆ. ಅಲ್ಲದೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಎಲ್ಲಿ ಕೆಲಸ ಸಿಗುತ್ತದೆಯೋ ಅಲ್ಲಿ ಬಾಂಗ್ಲಾ ವಲಸಿಗರು ಕೆಲಸ ಮಾಡುತ್ತಿದ್ದಾರೆ. ಈ ಭಾಗದಲ್ಲಿನ ಕೈಗಾರಿಕೆಗಳಲ್ಲಿ ಬಾಂಗ್ಲಾ ವಲಸಿಗರು ಬಂದಿದ್ದಾರೆ ಎಂಬ ಮಾಹಿತಿ ಇದೆ. ಈ ಕುರಿತಂತೆ ಆಯಾ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸಲಾಗುವುದು ಎಂದಿದ್ದಾರೆ.

ABOUT THE AUTHOR

...view details