ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿಂದು163 ಪಾಸಿಟಿವ್ ಪ್ರಕರಣ ಪತ್ತೆ: ಎರಡು ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೊಪ್ಪಳದಲ್ಲಿಂದು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು,163 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸೋಂಕಿನಿಂದ ಒಟ್ಟು 39 ಜನರು ಮೃತಪಟ್ಟಿದ್ದಾರೆ. ಇಂದು 70 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾಡಳಿತ ಭವನ
ಜಿಲ್ಲಾಡಳಿತ ಭವನ

By

Published : Aug 6, 2020, 10:46 PM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ‌ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ಇಂದು ಜಿಲ್ಲೆಯಲ್ಲಿ 163 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2033ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 71, ಕೊಪ್ಪಳ ತಾಲೂಕಿನಲ್ಲಿ 78, ಕುಷ್ಟಗಿ ತಾಲೂಕಿನಲ್ಲಿ 10 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 04 ಪ್ರಕರಣ ಸೇರಿ ಇಂದು ಒಟ್ಟು 163 ಪಾಸಿಟಿವ್ ಕೇಸ್ ದೃಢಪಟ್ಟಿವೆ. ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 39 ಜನರು ಮೃತಪಟ್ಟಿದ್ದಾರೆ. ಇಂದು 70 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್​-19 ಮೀಡಿಯಾ ಬುಲೆಟಿನ್​​

ಈವರೆಗೆ ಒಟ್ಟು 1060 ಜನರು ಗುಣಮುಖರಾಗಿದ್ದಾರೆ. 542 ಜನ ಸೋಂಕಿತರನ್ನು ಹೋಮ್​ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 30914 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 29209 ಜನರ ವರದಿ ಬಂದಿದೆ. ಇನ್ನೂ 1702 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details