ಕೊಪ್ಪಳ: ಸೆಪ್ಟೆಂಬರ್ ಒಂದರಿಂದ 16 ವರೆಗೆ ಜಿಲ್ಲೆಯಲ್ಲಿ ಒಟ್ಟು 17 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಲಿಂಗರಾಜು ಮಾಹಿತಿ ನೀಡಿದ್ದಾರೆ.
ಕೊಪ್ಪಳ: 16 ದಿನಗಳಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ - ಡೆಂಗ್ಯೂ ಪ್ರಕರಣ
ಕೋವಿಡ್-19 ಆತಂಕದ ನಡುವೆಯೇ ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಿಂದ ಸೆ. 16ರವರೆಗೆ ಒಟ್ಟು 17 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
![ಕೊಪ್ಪಳ: 16 ದಿನಗಳಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ 17 dengue cases detected in Koppal](https://etvbharatimages.akamaized.net/etvbharat/prod-images/768-512-13107090-thumbnail-3x2-lek.jpg)
ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸದ್ಯಕ್ಕೆ 80 ಮಕ್ಕಳು ವಿವಿಧ ಕಾರಣಕ್ಕಾಗಿ ದಾಖಲಾಗಿದ್ದಾರೆ. ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜನವರಿ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 160 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದರು.
ಈಗ ಮಳೆಗಾಲವಾಗಿರುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಜನರು ಸೊಳ್ಳೆಗಳನ್ನು ನಿಯಂತ್ರಿಸಲು ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜ್ವರ ಬಂದಾಗ ಆತಂಕಗೊಳ್ಳಬಾರದು, ವೈರಲ್ ಫೀವರ್ ಕಾಣಿಸಿಕೊಂಡಾಗ ಸಹ ಪ್ಲೇಟ್ ಲೆಟ್ ಗಳು ಕಡಿಮೆಯಾಗುತ್ತವೆ ಎಂದು ತಿಳಿಸಿದರು.