ಕೊಪ್ಪಳ: ಜಿಲ್ಲೆಯಲ್ಲಿ ಇಂದು 173 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,259 ತಲುಪಿದೆ. ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.
ಸೋಂಕಿತರ ತಾಲೂಕುವಾರು ವಿವರ:
ಗಂಗಾವತಿ ತಾಲೂಕಿನಲ್ಲಿ- 74, ಕೊಪ್ಪಳ 64, ಕುಷ್ಟಗಿ 23 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪ್ರಕರಣ ಪತ್ತೆಯಾಗಿವೆ. 7 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 99 ಜನ ಸೋಂಕಿತರು ಮೃತಪಟ್ಟಿದ್ದಾರೆ.