ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿ 19 ಕೊರೊನಾ ಕೇಸ್​​ ಪತ್ತೆ: 13,293ಕ್ಕೆ ಏರಿದ ಸೋಂಕಿತರ ಸಂಖ್ಯೆ - ಕೊಪ್ಪಳ ಜಿಲ್ಲೆಯಲ್ಲಿ 19 ಪಾಸಿಟಿವ್ ಪ್ರಕರಣಗಳು ಪತ್ತೆ

ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ 19 ಕೊರೊನಾ​ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

koppal
ಕೊಪ್ಪಳ ಜಿಲ್ಲೆಯಲ್ಲಿ 19 ಪಾಸಿಟಿವ್ ಪ್ರಕರಣಗಳು ಪತ್ತೆ..

By

Published : Oct 29, 2020, 8:20 AM IST

ಕೊಪ್ಪಳ:ಜಿಲ್ಲೆಯಲ್ಲಿ ನಿನ್ನೆ 19 ಕೊರೊನಾ​ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,293ಕ್ಕೆ ಏರಿಕೆಯಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ 19 ಕೊರೊನಾ ಪ್ರಕರಣಗಳು ಪತ್ತೆ

ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ. ಗಂಗಾವತಿ ತಾಲೂಕಿನಲ್ಲಿ-10, ಕೊಪ್ಪಳ ತಾಲೂಕಿನಲ್ಲಿ-3, ಕುಷ್ಟಗಿ ತಾಲೂಕಿನಲ್ಲಿ-4 ಹಾಗೂ ಯಲಬುರ್ಗಾ ತಾಲೂಕಿನಲ್ಲಿ-2 ಪ್ರಕರಣ ಸೇರಿ ಒಟ್ಟು 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 280 ಜನ ಸೋಂಕಿತರು ಮೃತಪಟ್ಟಿದ್ದಾರೆ. 101 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 12,609 ಜನರು ಗುಣಮುಖರಾಗಿದ್ದಾರೆ. 364 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details